ಅಭ್ಯರ್ಥಿ ಘೋಷಣೆ ಬೆನ್ನಲ್ಲೆ ಹೊಸ ಬಾಂಬ್‌ ಸಿಡಿಸಿದ ಎಸ್‌ ಟಿ ಸೋಮಶೇಖರ್‌ …..!

ಬೆಂಗಳೂರು:

    ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

   ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸಿಪಿ ಯೋಗೇಶ್ವರ್ ಅವರಿಂದ ಚನ್ನಾಗಿ ದುಡಿಸಿಕೊಂಡು ಇದೀಗ ಅವರನ್ನು ಕೈಬಿಟ್ಟಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ಅವರ ಮಾತು ಕೇಳಬಾರದು. ನನ್ನ ಮೇಲೆ ಯಾವದೇ ಶಿಸ್ತು ಕ್ರಮ ಜರುಗಿಸಿದರೂ ನನಗೆ ಭಯವಿಲ್ಲ. ನೋಡ್ತಾ ಇರಿ ಮುಂದೆ ಬೆಂಗಳೂರಿನ ಇಬ್ಬರು ಶಾಸಕರು ಸೇರಿದಂತೆ ಒಟ್ಟು ಎಂಟು ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗ್ತಾರೆ ಎಂದು ಹೇಳಿದ್ದಾರೆ. 

   ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಹೀಗಾಗಿ ನಾನು ಬಿಜೆಪಿ ಶಾಸಕನಾಗಿದ್ದರೂ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿರುತ್ತೇನೆ. ಯೋಗೇಶ್ವರ್ ವಿಚಾರದಲ್ಲಿ ಪಕ್ಷ ಈ ರೀತಿ ಮಾಡಬಾರದಿತ್ತು ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

   ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕೊನೆಗೂ ಗುರುವಾರ ಘೋಷಣೆಯಾಗಿದೆ. ಅಳೆದು ತೂಗಿ ಕೊನೆ ಕ್ಷಣದಲ್ಲಿ ಚನ್ನಪಟ್ಟಣದಿಂದ ಎನ್ ಡಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

Recent Articles

spot_img

Related Stories

Share via
Copy link