ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆ: ಸಚಿವ ಸೋಮಣ್ಣ ಭರವಸೆ

ಶಿರಸಿ:

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿರಸಿಯ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.ಶಿರಸಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಅವರೊಂದಿಗೆ ಸಂಭಾಷಿಸಿ, ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದರು.

    ೧೬೫ ಕಿ.ಮೀ. ಉದ್ದದ ಈ ಯೋಜನೆಗೆ ಸಂಬಂಧಿಸಿದ ಸಮೀಕ್ಷೆ ಪೂರ್ಣಗೊಂಡಿದ್ದು, ವಿವರಣಾತ್ಮಕ ಯೋಜನಾ ವರದಿ (ಡಿಪಿಆರ್) ಜೂನ್ ೨೦೨೬ರೊಳಗೆ ಸಿದ್ಧವಾಗುತ್ತದೆ ಎಂದು ಸಚಿವರು ತಿಳಿಸಿದರು. ಸುಮಾರು ೩,೦೦೦ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಆರಂಭವಾಗುತ್ತದೆ. ಮಲೆನಾಡು ಪ್ರದೇಶದ ಸಂಪರ್ಕವನ್ನು ಬಲಪಡಿಸಿ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವ ಈ ರೈಲು ಮಾರ್ಗ ೨೦೩೦ರೊಳಗೆ ಕಾರ್ಯಗತಗೊಳ್ಳುತ್ತದೆ ಎಂಬ ಭರವಸೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ರೈಲ್ವೆ ಇಲಾಖೆ ಆದ್ಯತೆ ನೀಡುತ್ತಿದೆ. ಸ್ಥಳೀಯರು ಈ ಯೋಜನೆಯಿಂದ ತುಂಬಾ ಲಾಭ ಪಡೆಯುತ್ತಾರೆ ಎಂದು ಸಚಿವರು ಹೇಳಿದರು. ರೈಲ್ವೆ ಸಚಿವರ ಭೇಟಿ ಹಾಗೂ ಹೇಳಿಕೆಯಿಂದ ಜನರಲ್ಲಿ ನಿರೀಕ್ಷೆಗಳು ಗರಿಗೆದರಿವೆ.

Recent Articles

spot_img

Related Stories

Share via
Copy link