ಮುಂದಿನ ಅಧಿವೇಶನದಲ್ಲಿಸದಾಶಿವ ವರದಿ ಮಂಡನೆ : ಪರಮೇಶ್ವರ್‌

ಬೆಂಗಳೂರು: 

     ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ.

    ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರು ನಡೆಸಿದ ಸಭೆ ಬಳಿಕ ಅವರು ಮಾತನಾಡಿದರು.

    ‘ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ’ ಎಂದು ಹೇಳಿದರು.

    ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಸೋಮವಾರ ಕರೆ ನೀಡಿದ್ದಾರೆ. 

    ಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ಈ ರೀತಿ ಹೇಳುತ್ತಿದ್ದೇನೆ. ಹೀಗೆ ಹೇಳುವ ಸಂದರ್ಭ ಬಂದಿದೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link