ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ

ಚಿತ್ರದುರ್ಗ:

     ರೇಣುಕಾಸ್ವಾಮಿ  ಸಾವಿನಿಂದ ಅವರ ಕುಟುಂಬಕ್ಕೆ ಆಧಾರ ಆಗಿದ್ದವರೇ ಈಗ ಇಲ್ಲದಂತೆ ಆಗಿದೆ. ಇದರಿಂದ ಅವರ ಕುಟುಂಬಕ್ಕೆ ಜೀವನ ನಡೆಸೋದು ಅವರಿಗೆ ಕಷ್ಟ ಆಗುತ್ತಿದೆ. ಈಗ ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸೋದಾಗಿ ಚಳ್ಳಕೆರೆ ಕೈ ಶಾಸಕ ಟಿ ರಘುಮೂರ್ತಿ ಭರವಸೆ ನೀಡಿದ್ದಾರೆ. ಇದರಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಆಗಲಿ ಎಂಬುದು ರಘಮೂರ್ತಿ ಅವರ ಆಲೋಚನೆ.

 
    ರೇಣುಕಾಸ್ವಾಮಿ ಕುಟುಂಬಕ್ಕೆ ರಘುಮೂರ್ತಿ ಆತ್ಮಸ್ಥೈರ್ಯ ಹೇಳಿದ್ದಾರೆ. ಸದ್ಯ ಕುಟುಂಬಕ್ಕೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಇದೇ ವೇಳೆ ರೇಣುಕಾಸ್ವಾಮಿ ಪತ್ನಿ ಸಹನಾಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ.ಮುರುಘಾಮಠದ ಆಡಳಿತಾಧಿಕಾರಿ ಶಿವಯೋಗಿ ಕಳಸದ್​ ಅವರಿಗೆ ಕರೆ ಮಾಡಿ  ಮಠದ ಸಂಸ್ಥೆಯಲ್ಲಿ ಸಹನಾಗೆ ಕೆಲಸ ನೀಡಲು ಮನವಿ ಮಾಡಿದ್ದಾರೆ. ಸಿರಿಗೆರೆ ತರಳಬಾಳು ಮಠದ ಸಂಸ್ಥೆಯಲ್ಲೂ ಪ್ರಯತ್ನಕ್ಕೆ ಸಲಹೆ ನೀಡಿದ್ದಾರೆ. ಇನ್ನು, ಕೊನೆಯ ಪಕ್ಷ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಕ್ಲರ್ಕ್ ಪೋಸ್ಟ್ ಕೊಡಿಸೋದಾಗಿ ಭರವಸೆ ಕೊಟ್ಟಿದ್ದಾರೆ.

Recent Articles

spot_img

Related Stories

Share via
Copy link