ಸಾಹಿತಿಗಳಿಗೆ ಬೆದರಿಕೆ ಪತ್ರ : ಹಿಂದು ಕಾರ್ಯಕರ್ತನ ಬಂಧನ

ದಾವಣಗೆರೆ: 

   ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು.

    ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.
    ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ  ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap