ಬೆಂಗಳೂರು :
ವಿದ್ಯುತ್ ಸರಬರಾಜು ಕಂಪನಿಗಳಾದ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಮಾಡಿದೆ.
ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ