ಹೈದರಾಬಾದ್:
ಟಾಲಿವುಡ್ ನ ಕ್ಯೂಟ್ ಜೋಡಿ ಎಂದೇ ಜನಪ್ರಿಯರಾಗಿದ್ದ ನಾಗಚೈತನ್ಯ ಮತ್ತು ಸಮಂತಾ ತಮ್ಮ ದಾಂಪತ್ಯ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ.
ಇಂದು ಇನ್ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಸಮಂತಾ, ಪತಿ ನಾಗಚೈತನ್ಯ ಅವರಿಂದ ದೂರ ಆಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಸಾಕಷ್ಟು ಸಮಾಲೋಚನೆ ನಂತರ ನಾನು ಹಾಗೂ ಚೈ ಸತಿ-ಪತಿಯ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದೇವೆ ಎಂದಿದ್ದಾರೆ.
https://www.instagram.com/p/CUhawZvrPK9/?utm_source=ig_web_copy_link
ಅಭಿಮಾನಿಗಳು, ಆಪ್ತರು ಹಾಗೂ ಮಾಧ್ಯಮದವರಲ್ಲಿ ಮನವಿ ಮಾಡಿರುವ ಸಮಂತಾ, ಇಂತಹ ಕಷ್ಟದ ಸಂದರ್ಭದಲ್ಲಿ ನಮ್ಮ ಜೊತೆ ಸಹಕರಿಸಿ, ನಮ್ಮ ಖಾಸಗಿತನ ಗೌರವಿಸಿ. ನಾವು ಬೇರೆಯಾಗಲೇಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ