ರಾಮನಗರ
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ರಾಮನಗರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವರದಿಯಾಗಿದೆ. ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಕಾಸ್, ಚೇತನ್ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಿದ ಈ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.








