ಸಂವಿಧಾನ ಹತ್ಯಾ ದಿವಸ ಆಚರಣೆಗೆ ಮುಂದಾಯ್ತು ಕೇಂದ್ರ ಸರ್ಕಾರ ….!

ನವದೆಹಲಿ:

   ಕೇಂದ್ರ ಸರ್ಕಾರ ಜೂನ್ 25ನ್ನು ಸಂವಿಧಾನ ಹತ್ಯೆ ದಿನ ಎಂದು ಘೋಷಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹೀಗಾಗಿ ಆ ದಿನವನ್ನು ಸಂವಿಧಾನ ಹತ್ಯೆ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

    ‘1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರಿ ಮನಸ್ಥಿತಿಯನ್ನು ಪ್ರದರ್ಶಿಸಿ, ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಭಾರತದ ಪ್ರಜಾಪ್ರಭುತ್ವದ ಆತ್ಮವನ್ನೇ ಕತ್ತು ಹಿಸುಕಿದ್ದರು. ಲಕ್ಷಗಟ್ಟಲೆ ಜನರನ್ನು ವಿನಾಕಾರಣ ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು. ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ನಿರ್ಧರಿಸಿದೆ. 1975ರ ತುರ್ತುಪರಿಸ್ಥಿತಿಯ ಅಮಾನವೀಯ ನೋವನ್ನು ಸಹಿಸಿಕೊಂಡವರೆಲ್ಲರ ಅಪಾರ ಕೊಡುಗೆಯನ್ನು ಈ ದಿನ ನೆನಪಿಸುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. 

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರದ ಉದ್ದೇಶವು ಸರ್ವಾಧಿಕಾರಿ ಸರ್ಕಾರದ ಅಸಂಖ್ಯಾತ ಚಿತ್ರಹಿಂಸೆ ಮತ್ತು ದಬ್ಬಾಳಿಕೆಯನ್ನು ಎದುರಿಸುತ್ತಿದ್ದರೂ ಪ್ರಜಾಪ್ರಭುತ್ವವನ್ನು ಪುನರುಜ್ಜೀವನಗೊಳಿಸಲು ಹೋರಾಡಿದ ಲಕ್ಷಾಂತರ ಜನರ ಹೋರಾಟವನ್ನು ಗೌರವಿಸುವುದಾಗಿದೆ. ‘ಸಂವಿಧಾನ ಹತ್ಯೆ ದಿನ’ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಪ್ರತಿಯೊಬ್ಬ ಭಾರತೀಯನೊಳಗೆ ವೈಯಕ್ತಿಕ ಸ್ವಾತಂತ್ರ್ಯದ ಅಮರ ಜ್ವಾಲೆಯನ್ನು ಜೀವಂತವಾಗಿಡಲು ಕೆಲಸ ಮಾಡುತ್ತದೆ, ಇದರಿಂದ ಭವಿಷ್ಯದಲ್ಲಿ ಕಾಂಗ್ರೆಸ್‌ನಂತಹ ಯಾವುದೇ ಸರ್ವಾಧಿಕಾರಿ ಮನಸ್ಥಿತಿ ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link