ನವದೆಹಲಿ :
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.
ನಟಿ ರಾಗಿಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ, ನಟಿ ರಾಗಿಣಿ ಪರ ವಕೀಲಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಪೀಠವು ಜನವರಿಗೆ ಮುಂದೂಡಿಕೆ ಮಾಡಿದೆ. ಹೀಗಾಗಿ ನಟಿ ರಾಗಿಣಿಗೆ ಈ ವರ್ಷ ಬಿಡುಗಡೆ ಭಾಗ್ಯವಿಲ್ಲದಂತಾಗಿದ್ದು, ಜೈಲಿನಲ್ಲಿಯೇ ಹೊಸ ವರ್ಷ ಆಚರಣೆ ಮಾಡುವಂತೆ ಆಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಬಂಧಿಸಲ್ಪಟ್ಟು, ಜೈಲು ಸೇರಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗಾಗಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಗೆ ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ಜನವರಿಗೆ ಮುಂದೂಡಿಕೆ ಮಾಡಿದೆ. ಈ ಮೂಲಕ ಈ ವರ್ಷ ನಟಿ ರಾಗಿಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ ಎಂಬಂತೆ ಆಗಿದೆ. ಅಲ್ಲದೇ ಹೊಸ ವರ್ಷವನ್ನು ಜೈಲಿನಲ್ಲಿಯೇ ಆಚರಿಸುವಂತೆ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ