ಬೆಂಗಳೂರು:
ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಿರಿಯ ಕಲಾವಿಧ ಇನ್ನಿಲ್ಲವಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ( Ashok Rao ) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ.
ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ನಟ ಅಶೋಕ್ ರಾವ್ ಗುರ್ತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವಂತ ಅವರು, ಇಂದು ಇನ್ನಿಲ್ಲವಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ