ನಟಿ ಸಂಜನಾ, ರಾಗಿಣಿಗೆ ಮತ್ತೆ ಹೆಗಲೇರಿದ ಡ್ರಗ್ಸ್‌ ಕೇಸ್‌

ಬೆಂಗಳೂರು:

    ಸ್ಯಾಂಡಲ್‌ವುಡ್​ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣ ನಟಿ ಸಂಜನಾ ರಾಗಿಣಿಗೆ ಮತ್ತೆ ಹೆಗಲೇರಿದೆ. ಸಿಸಿಬಿ ನಟಿಯರಿಗೆ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡ್ರಗ್ಸ್ ಕೇಸ್‌ನನಲ್ಲಿ ತಮ್ಮ ಮೇಲಿರವ ಪ್ರಕರಣ ರದ್ದು ಮಾಡುವಂತೆ ನಟಿಯರಾದ ಸಂಜನಾ ಮತ್ತು ರಾಗಿಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಂತೆಯೇ ನಟಿ ಸಂಜನಾ ಮತ್ತು ರಾಗಿಣಿ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

    ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ, ರಾಗಿಣಿಗೆ  ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್‌ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.

   ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಕಳೆದ 2024 ಜೂನ್ 24ರಂದು ಹೈಕೋರ್ಟ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಆರೆಸ್ಟ್ ಮಾಡಿದ್ದರು. ಜಾಮೀನಿನ ಮೇಲೆ ನಟಿ ಸಂಜನಾ ಜೈಲಿನಿಂದ ಹೊರಗಡೆ ಬಂದಿದ್ದರು. ಹೀಗಾಗಿ ನಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

   2020ರ ಆಗಸ್ಟ್ 26ರಂದು ಸೆಲಿಬ್ರಿಟಿಗಳು, ಸಿನಿ ನಟ, ನಟಿಯರು ಹಾಗೂ ಉದ್ಯಮಿಗಳ ಮಕ್ಕಳು ಡ್ರಗ್ಸ್‌ ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್‌ಸಿಬಿ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ರಾಯಲ್ ಸೂಟ್ಸ್ ಹೋಟೆಲ್ ಮೇಲೆ ದಾಳಿ ಮಾಡಿದ್ದರು. ಆಗ ಅಪಾರ ಪ್ರಮಾಣದ ಮಾದಕ ವಸುಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅನೂಪ್, ರವೀಂದ್ರನ್ ಹಾಗೂ ಡಿ. ಅಂಕಿತ ಎಂಬ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದರು. ನಂತರ ತನಿಖೆ ವೇಳೆ ಇವರು ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮಾದಕ ವಸ್ತು ಪೂರೈಕೆ ಮಾಡಲಾಗುತ್ತಿದ್ದರು ಎಂಬ ಸ್ಫೋಟಕ ಸಂಗತಿ ಹೊರಬಿದ್ದಿತ್ತು. ಬಳಿಕ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿತ್ತು.

Recent Articles

spot_img

Related Stories

Share via
Copy link