ಡ್ರಗ್ಸ್ ಕೇಸ್‌ನಲ್ಲಿ ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ

ಬೆಂಗಳೂರು:

     ಡ್ರಗ್ಸ್ ಕೇಸ್‌ನಲ್ಲಿ ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹೈಕೋರ್ಟ್‌ನಲ್ಲಿ ಪ್ರಕರಣ ರದ್ದಾದ ಬಳಿಕ ನಟಿ ನಿರಾಳರಾಗಿದ್ದರು. ಆದರೆ, ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ ಈ ಹಿಂದೆ ಬಿಗ್ ರಿಲೀಫ್ ನೀಡಿತ್ತು. ಕೇಸ್‌ನಲ್ಲಿ ಸಿಸಿಬಿಯಿಂದ ನಟಿಯರು ಸೇರಿ ಡ್ರಗ್ಸ್ ಪೆಡ್ಲರ್‌ಗಳ ಬಂಧನವಾಗಿತ್ತು. ಆದರೆ, ಎಫ್‌ಐಆರ್ ರದ್ದು ಕೋರಿ ಸಂಜನಾ ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ ಏಕ ಸದಸ್ಯ ಪೀಠದಿಂದ ಎಫ್‌ಐಆರ್ ರದ್ದುಗೊಳಿಸಲಾಗಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

    ಡ್ರಗ್ಸ್ ಕೇಸ್‌ನಲ್ಲಿ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಸಂಜನಾ ಹೊರಗಡೆ ಬಂದಿದ್ದರು. ಹೈಕೋರ್ಟ್‌ನಲ್ಲಿ ಪ್ರಕರಣ ರದ್ದಾದ ಬಳಿಕ ಇದೀಗ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ಹಂಚಿಕೊಂಡಿದ್ದು, ನಟಿ ಸಂಜನಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಗುತ್ತಿದ್ದಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ನಾಲ್ಕು ವರ್ಷಗಳ ಹಿಂದೆ ಬಿರುಗಾಳಿ ಎಬ್ಬಿಸಿದ್ದ ಉದ್ಯಮಿಗಳು ಹಾಗೂ ಸೆಲೆಬ್ರಿಟಿಗಳಿದ್ದ ಡ್ರಗ್ಸ್‌ ಕೇಸ್‌ನಲ್ಲಿ ನಟಿ ಸಂಜನಾ ಗಲ್ರಾನಿ, ಉದ್ಯಮಿ ಶಿವಪ್ರಕಾಶ್‌ ಮತ್ತು ಆದಿತ್ಯ ಅಗರವಾಲ್‌ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ಜೂನ್‌ನಲ್ಲಿ ಮಹತ್ವದ ಆದೇಶ ನೀಡಿತ್ತು. ಇದರಿಂದಾಗಿ ಸಿಐಡಿ ಪೊಲೀಸರಿಗೆ ತೀವ್ರ ಹಿನ್ನಡೆಯಾಗಿತ್ತು. 

   ಮೊದಲನೇ ಆರೋಪಿ ಶಿವಪ್ರಕಾಶ್‌ ಅಲಿಯಾಸ್‌ ಚಿಪ್ಪಿ, 14ನೇ ಆರೋಪಿ ಸಂಜನಾ ಗಲ್ರಾನಿ ಮತ್ತು 22ನೇ ಆರೋಪಿ ಆದಿತ್ಯ ಅಗರವಾಲ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ ಅವರು ನಟಿ ಸೇರಿ ಮೂವರಿ ಆರೋಪಿಗಳ ವಿರುದ್ಧದ ಕೇಸ್‌ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದರು.

Recent Articles

spot_img

Related Stories

Share via
Copy link