ಬೆಂಗಳೂರು:
ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಸಮಗ್ರ ಕೌಶಲ್ಯ ತರಬೇತಿ ನೀಡಲು ಮೈಸೂರು ಮತ್ತು ಧಾರವಾಡದಲ್ಲಿ ಅತ್ಯಾಧುನಿಕ ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸುವ ಕುರಿತು
ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ಕೇಂದ್ರಗಳಲ್ಲಿ ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ವಿಷಯಗಳಿಗೆ ತರಬೇತಿ ನೀಡಲಾಗುತ್ತದೆ. ನಮ್ಮ ಇಲಾಖೆಯ ಈ ವಿಶೇಷವಾದ ಯೋಜನೆಯಿಂದ ಅಸಂಖ್ಯಾತ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಅನುಕೂಲವಾಗಲಿದೆ.
ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ., ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು, ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಏಜೆನ್ಸಿಗಳ ಪ್ರಮುಖರು ಪಾಲ್ಗೊಂಡಿದ್ದರು.
ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ ಸಂತೋಷ್ ಲಾಡ್ ಅವರು, ರಾಯಚೂರಿನ ಆರ್ ಟಿಪಿಎಸ್ ನೌಕರರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಉಪ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಆರ್ ಟಿಪಿಎಸ್ ನೌಕಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಬಿಎಫ್ ಡಬ್ಲ್ಯೂ ಕಾರ್ಖಾನೆಯ ನೌಕರರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಚರ್ಚೆ ನಡೆಸಿದರು.ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್. ಗೋಪಾಲಕೃಷ್ಣ, ಬಿ ಎಂ ಡಬ್ಲ್ಯೂ ಕಾರ್ಖಾನೆಯ ಆಡಳಿತ ವರ್ಗದವರು, ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು, ಕಾರ್ಖಾನೆಯ ಸಂಘದ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು
