ಸಂತೋಷ್ ಕೆ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ : ಕೆ ಎಸ್ ಈಶ್ವರಪ್ಪ


ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು DO No. RDP:02:SGY:2022, ದಿನಾಂಕ: 28.03.2022ರಂದು ಸ್ಪಷ್ಟೀಕರಣ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಂತೋಷ್ ಕೆ ಪಾಟೀಲ್ ಉಲ್ಲೇಖಿಸಿರುವ ಕಾಮಗಾರಿಗೆ ಅನುಮೋದನೆ ಕೋರಿಲ್ಲ ಮತ್ತು ಸರ್ಕಾರವು ಯಾವುದೇ ಕಾಮಗಾರಿಯನ್ನು ಮಂಜೂರು ಮಾಡಿಲ್ಲ.ಈ ಕಾಮಗಾರಿಯ ಸಂಬಂಧ ಇಲಾಖೆಯು ಯಾವುದೇ ಕಾರ್ಯಾದೇಶವನ್ನು ನೀಡಿಲ್ಲ ಮತ್ತು ಆಡಳಿತಾತ್ಮಕ ಅನುಮೋದನೆಯನ್ನು ಸಹಾ ನೀಡಿಲ್ಲ.

ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ

ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಕೆ ಪಾಟೀಲ್ ಹೇಳುವಂತಹ ಕಾಮಗಾರಿಯು ಇಲಾಖಾ ವತಿಯಿಂದ ಅನುಷ್ಠಾನಗೊಂಡಿಲ್ಲ. ಯಾವುದೇ ಸರ್ಕಾರಿ ಏಜೆನ್ಸಿಗಳು ಈ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಿಲ್ಲ ಅಥವಾ ಉಸ್ತುವಾರಿ ಮಾಡಿಲ್ಲ. ಹೀಗಾಗಿ ಹಣ ಬಿಡುಗಡೆ ಮಾಡುವ ಪ್ರಶ್ನೆಯೇ ಉದ್ಬವವಾಗುವುದಿಲ್ಲ ಎಂಬ ಸ್ಪಷ್ಟವಾದ ಸ್ಪಷ್ಟೀಕರಣವನ್ನು ಇಲಾಖೆಯ ಮುಖ್ಯಸ್ಥರು ಈಗಾಗಲೇ ನೀಡಿದ್ದಾರೆ.

ದಿನಾಂಕ: ೦೯.೦೩.೨೦೨೨ರಂದು ನ್ಯೂಸ್ ೧೮ ಸುದ್ದಿ ವಾಹಿನಿಯಲ್ಲಿ ಸಂತೋಷ್ ಕೆ ಪಾಟೀಲ್ ಸಂದರ್ಶನ ನೀಡಿ ಮಾಡಿದ ಕಪೋಲಕಲ್ಪಿತ ಆರೋಪವು ನನ್ನ ಗಮನಕ್ಕೆ ಬಂದ ಕೂಡಲೇ ದಿನಾಂಕ: ೧೦.೦೩.೨೦೨೨ರಂದು ಸಂತೋಷ್ ಕೆ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಮಾನ್ಯ ೬ನೇ ಅಪರ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯ ಸಮಕ್ಷಮ ಸಲ್ಲಿಸಲಾಗಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap