ಉಡುಪಿ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು.ಇದೀಗ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರೆ ನೀಡಿ ಪೇಚೆಗೆ ಸಿಲುಕಿದ ಸಿದ್ದರಾಮಯ್ಯ!
ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಗುತ್ತಿಗೆ ಹಣ ಬಿಡುಗಡೆಗಾಗಿ ಶೇ.40ರಷ್ಟು ಕಮೀಷನ್ ಆರೋಪವನ್ನು ಸಂತೋಷ್ ಎಂಬುವರು ಮಾಡಿದ್ದರು. ಅಲ್ಲದೇ ಬಿಜೆಪಿ ವರಿಷ್ಠರಿಗೂ ಈ ಸಂಬಂಧ ಭೇಟಿಯಾಗಿ ದೂರು ನೀಡಿದ್ದರು. ಈ ವಿಷಯವಾಗಿಯೇ ಕಾಂಗ್ರೆಸ್ ಕಳೆದ ವಿಧಾನಸಭೆಯ ವೇಳೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿ, ಸಂಪುಟದಿಂದ ಕಮೀಷನ್ ಆರೋಪ ಹೊತ್ತಿರುವಂತ ಈಶ್ವರಪ್ಪ ಅವರನ್ನು ಕೈಬಿಡುವಂತೆಯೂ ಒತ್ತಾಯಿಸಿತ್ತು.
ಕರ್ನಾಟಕದಲ್ಲಿ ಮತ್ತೊಂದು ʻ ಧರ್ಮ ದಂಗಲ್ ʼ : ಬೆಂಗಳೂರಿನ ರಸ್ತೆಗಳ ʻ ಮುಸ್ಲಿಂ ಹೆಸರು ʼ ಬದಲಾವಣೆಗೆ ಬಿಗ್ ಫೈಟ್
ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ ಎಂದು ನಾಪತ್ತೆಗೂ ಮುನ್ನಾ ಮಾಧ್ಯಮ ಪ್ರತಿನಿಧಿಗಳಿಗೆ ಎಂಬುದಾಗಿ ಡೆತ್ ನೋಟ್ ಕೂಡ ವಾಟ್ಸಾಪ್ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾಪತ್ತೆಯಾಗಿರುವಂತ ಸಂತೋಷ್ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಬೆನ್ನಲ್ಲೇ, ಉಡುಪಿಯ ಖಾಸಗಿ ಹೋಟೆಲ್ ನಲ್ಲಿ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಮನೆ ಕಟ್ಟೋರಿಗೆ ಬಿಗ್ ಶಾಕ್ : ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ!
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ