ಅಕ್ರಮ ಹಣ ವರ್ಗಾವಣೆ : ಸತ್ಯೇಂದ್ರ ಕುಮಾರ್ ಜೈನ್‌ ಮಧ್ಯಂತರ ಜಾಮೀನು ವಿಸ್ತರಣೆ

ನವದೆಹಲಿ: 

     ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಡಿಸೆಂಬರ್ 4 ರವರೆಗೆ ವಿಸ್ತರಿಸಿದೆ. ಅಂದೇ ಸಾಮಾನ್ಯ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದಿದೆ.

    ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರು ಇಂದು ಲಭ್ಯವಾಗದ ಕಾರಣ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು ಡಿಸೆಂಬರ್ 4ರಂದು ವಿಚಾರಣೆಯನ್ನು ಮುಂದೂಡಿತು.

     ಈ ಮಧ್ಯೆ, ಈ ಹಿಂದೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂದು ಪೀಠ ಹೇಳಿದೆ.

    ಇದಕ್ಕೂ ಮೊದಲು, ಜೈನ್ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 9 ರವರೆಗೆ ವಿಸ್ತರಿಸಿತ್ತು. ಪ್ರಕರಣದ ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲು ಚಾಲ್ತಿಯಲ್ಲಿರುವ ಕಾನೂನು ಪ್ರಕ್ರಿಯೆಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡದಂತೆ ಜೈಲ್ ಅವರಿಗೆ ಎಚ್ಚರಿಕೆ ನೀಡಿತು. 

    ಎಎಪಿ ನಾಯಕ ತನ್ನ ಜಾಮೀನು ಅರ್ಜಿಯು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಪದೇ ಪದೆ ಪ್ರಕರಣದ ವಿಚಾರಣೆಯನ್ನು ಮುಂದೂಡಲು ಪ್ರಯತ್ನಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿಕೊಂಡಿದೆ.ಜೈನ್ ಅವರು ವಿಚಾರಣಾ ನ್ಯಾಯಾಲಯದಿಂದ 16 ಬಾರಿ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

     ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಮೇ 26ರಂದು ಜೈನ್‌ಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್, ಅವರು ತಮ್ಮ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತಮ್ಮಿಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕಿದೆ ಎಂದು ಹೇಳಿದೆ.

    ಸೆಪ್ಟೆಂಬರ್ 12 ರಂದು, ಪ್ರಕರಣದಲ್ಲಿ ಜೈನ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಲಾಗಿತ್ತು.ತಮ್ಮೊಂದಿಗೆ ಸಂಪರ್ಕ ಹೊಂದಿದ್ದ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪದ ಮೇಲೆ ಕಳೆದ ವರ್ಷ ಮೇ 30ರಂದು ಎಎಪಿ ನಾಯಕನನ್ನು ಇ.ಡಿ ಬಂಧಿಸಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರಲ್ಲಿ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡು, ಜೈನ್‌ ಅವರನ್ನು ಬಂಧಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap