ಬೆಳಗಾವಿ
ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 3 ತಿಂಗಳ ಅವಧಿಯಲ್ಲಿ 3.40 ಕೋಟಿ ನಗದು, 20.82 ಲಕ್ಷ ಮೌಲ್ಯದ ಚಿನ್ನಾಭರಣ, 6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.
ಯಲ್ಲಮ್ಮ ದೇವಸ್ಥಾನದಲ್ಲಿ ಗುರುವಾರ ಇಡೀ ದಿನ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಪೊಲೀಸರು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪ್ರತಿಬಾರಿ ಎಣಿಕೆ ನಡೆದಾಗ 1 ಕೋಟಿಯಿಂದ 1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. 2024 ಡಿಸೆಂಬರ್ 14ರಿಂದ 2025 ಮಾರ್ಚ್ 12ರವರೆಗೆ ಮೂರು ತಿಂಗಳ ಅವಧಿಯಲ್ಲಿ ಒಟ್ಟು 3.68 ಕೋಟಿ ರೂ. ಸಂಗ್ರಹವಾಗಿದೆ.








