ಸಾವರ್ಕರ್‌ ನಮ್ಮ ಆರಾಧ್ಯ ದೈವ : ಉದ್ದವ್‌ ಠಾಕ್ರೆ

ಮಲೇಗಾಂವ್:

      ಸಾವರ್ಕರ್‌ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ.

    ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ. ‘ನನ್ನ ಹೆಸರು ಸಾವರ್ಕರ್‌ ಅಲ್ಲ. ನನ್ನ ಗೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು.

    ಮಾಲೆಗಾಂವ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಉದ್ಧವ್ ಠಾಕ್ರೆಯವರು, ರಾಹುಲ್ ಗಾಂಧಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

 

     ಸಾವರ್ಕರ್ ನಮ್ಮ ಆರಾಧ್ಯ ದೈವ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಾಗಿದೆ. ಆದರೆ,  ಸಾವರ್ಕರ್ ಅವರ ಅವಮಾನವನ್ನು ಸಹಿಸಲಾಗುವುದಿಲ್ಲ. ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆಯನ್ನು ಅನುಭವಿಸಿದರು. ಅವರ ನೋವುಗಳನ್ನು ನಾವು ಓದಬಹುದು. ಆದರೆ, ಇದು ತ್ಯಾಗದ ರೂಪವಾಗಿದೆ ಎಂದು ತಿಳಿಸಿದರು.

     ”ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಅದರ ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿ ಬಂದಿದ್ದೇವೆ. ನಿಮ್ಮನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಲಾಗುತ್ತಿದೆ. ಈ ಸಮಯವನ್ನು ವ್ಯರ್ಥವಾಗಲು ಬಿಟ್ಟರೆ, ಪ್ರಜಾಪ್ರಭುತ್ವವು ಅಸ್ತಿತ್ವದಲ್ಲಿಲ್ಲದಂತಾಗುತ್ತದೆ. 2024 ಕೊನೆಯ ಚುನಾವಣೆಯಾಗಲಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link