ನವದೆಹಲಿ:
ಹರಿಯಾಣ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. 90 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸಲಿದೆ.
ಹಿಸ್ಸಾರ್‌ನ ಅಭಿವೃದ್ಧಿಗಾಗಿ ನಾನು ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರುವ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಹೇಳಿದ್ದಾರೆ.
ಸಾವಿತ್ರಿ ಜಿಂದಾಲ್ ಅವರ ಜೊತೆಗೆ ಮತ್ತಿಬ್ಬರು ಸ್ವತಂತ್ರ್ಯ ಶಾಸಕರು ಕೂಡ ಬಿಜೆಪಿ ಸೇರಲು ಮುಂದಾಗಿದ್ದಾರೆ. ಹೀಗಾಗಿ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಂತಾಗುತ್ತದೆ. ಸಾವಿತ್ರಿ ಜಿಂದಾಲ್, ದೇವೇಂದ್ರ ಖಾಡ್ಯಂ, ರಾಜೇಶ್ ಜೂನ್ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಅವರ ತಾಯಿ ಜಿಂದಾಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾಣಾ ಅವರನ್ನು 18,941 ಮತಗಳ ಅಂತರದಿಂದ ಸೋಲಿಸಿದ್ದಾರೆ. ಜಿಂದಾಲ್ 49,231 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 30,290 ಮತಗಳನ್ನು ಪಡೆದರು.