SC ಓಳ ಮೀಸಲಾತಿ : ಮರು ಪರಿಶೀಲನೆಗೆ ಸುಪ್ರೀಂ ನಕಾರ….!

ನವದೆಹಲಿ: 

   ಪರಿಶಿಷ್ಟ ಜಾತಿ ಅತ್ಯಂತ ಹಿಂದೂಳಿದ ವರ್ಗಗಳಿಗೆ ಒಳ ಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

   ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠ, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿಗಳು ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

   ಕಳೆದ ಆಗಸ್ಟ್ 1 ರಂದು ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಗಳು ಎಸ್ ಸಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಬಹುದು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯೊಳಗೆ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.

Recent Articles

spot_img

Related Stories

Share via
Copy link