ನವದೆಹಲಿ:
ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಇಂದು ಐತಿಹಾಸಿಕ ತೀರ್ಪು ನೀಡುವ ಸಾಧ್ಯತೆ ಇದೆ.
ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಕೇಂದ್ರದ ಪ್ರತಿನಿಧಿಗಳಾದ ಅಟಾರ್ನಿ ಜನರಲ್ ಕೆ.ಕೆ.
ವೇಣುಗೋಪಾಲ್ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಬಲಬೀರ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಹಿರಿಯ ವಕೀಲರ ವಾದಗಳನ್ನು ಆಲಿಸಲಾಗಿದೆ.
ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಸಂಬಂಧ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಇತರೆ ಮೇಲ್ವರ್ಗದವರಿಗೆ ಸಿಗುವ ಉನ್ನತ ಹುದ್ದೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಲಭ್ಯವಾಗುತ್ತಿಲ್ಲ.
ಬಡ್ತಿಯಲ್ಲಿ ಮೀಸಲು ಅನಿವಾರ್ಯ, ಸೂಕ್ತ ಮಾರ್ಗಸೂಚಿ ರಚಿಸುವುದು ಅಗತ್ಯವೆಂದು ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್ ಈ ಹಿಂದೆ ತಿಳಿಸಲಾಗಿತ್ತು.
ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕುರಿತು ರಾಜ್ಯಗಳು ನಿರ್ಧರಿಸಬೇಕೆಂದು ಹೇಳಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಐತಿಹಾಸಿಕ ತೀರ್ಪು ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ