ತುಮಕೂರು:
ಜಿಲ್ಲೆಯಲ್ಲಿ ಬಿರುಗಾಳಿಯಿಂದ ಕೂಡಿದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನವೆಂಬರ್ 19 ಹಾಗೂ 20ರಂದು ಜಿಲ್ಲೆಯ ಎಲ್ಲ ಅಂಗನವಾಡಿ/ ಶಿಶುವಿಹಾರ ಹಾಗೂ ಸರ್ಕಾರಿ/ಅನುದಾನಿತ/ಅನುದಾನರಹಿತ ಕಿರಿಯ/ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬಂದು ಹೋಗಲು ತೊಂದರೆಯಾಗಬಹುದಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ