ಮೇ.29ರಿಂದ ಶಾಲೆ ಆರಂಭ ….!

ಬೆಂಗಳೂರು :

    ಮೇ.29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.

    ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.

   ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

Recent Articles

spot_img

Related Stories

Share via
Copy link
Powered by Social Snap