ಬೆಂಗಳೂರು :
ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನ್ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ರದ್ದುಗೊಳಿಸಲಾಗಿದೆ.
2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳ ( Freshers ) ಫಲಿತಾಂಶವನ್ನು ಅವರು ಈ ಹಿಂದೆ ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂಕಗಳನ್ನು ನೀಡಿ, ಪ್ರಕಟಗೊಳಿಸಲು ತೀರ್ಮಾನಿಸಿದೆ.
ಪ್ರಸ್ತುತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ನೊಂದಾಯಿಸಿಕೊಂಡ ಪುನರಾವರ್ತಿತ ( Repeaters ) ವಿದ್ಯಾರ್ಥಿಗಳು ಹಾಗೂ ಖಾಸಗಿ ( Private) ಅಭ್ಯರ್ಥಿಗಳ ಫಲಿತಾಂಶವನ್ನು ಮೇಲೆ ತಿಳಿಸಿದಂತೆ ಪ್ರಕಟಗೊಳಿಸಲು ಯಾವುದೇ ಸ್ಪಷ್ಟ ದಾಖಲೆಗಳು ಲಭ್ಯವಿಲ್ಲದ ಪ್ರಯುಕ್ತ, ಇಲಾಖೆಯು ಮುಂದಿನ ದಿನಗಳಲ್ಲಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವುದು ಎಂದು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
