ಬೆಂಗಳೂರು :
ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋದಾಗಿ ತಿಳಿಸಿದೆ.
ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ. ಶೇ.35ರಷ್ಟು ಅಂಕ ನೀಡಿ ಪಾಸ್ ಮಾಡೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.
ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ದ್ವಿತೀಯ ಪಿಯು ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿರಲಿಲ್ಲ. ಇದರಿಂದಾಗಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿದಂತ ಸಂದರ್ಭದಲ್ಲಿ ಸರ್ಕಾರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋ ನಿರ್ಧಾರವನ್ನು ಕೋರ್ಟ್ ಗೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ