ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ. ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯಲ್ಲ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ