
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯಕಲಾವಿದ ಮೋಹನ್ ಜೂನೇಜ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ರಾತ್ರಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಹಾಸ್ಪಿಟಲ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
LPG ಸಿಲಿಂಡರ್ ದರದಲ್ಲಿ ಮತ್ತೆ 50 ರೂ. ಹೆಚ್ಚಳ! ಇಂದಿನಿಂದಲೇ ಜಾರಿ, ಗ್ರಾಹಕರಿಗೆ ಬೆಲೆ ಏರಿಕೆ ಬರೆ
ಮೋಹನ್ ಜುನೇಜಾ ಅವರು ಕನ್ನಡ ಹಿರಿತೆರೆ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದರು. ‘ವಠಾರ’ ಸೀರಿಯಲ್ನಿಂದ ಜನಪ್ರಿಯರಾದ ಮೋಹನ್ ನಂತರ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದಾರೆ. ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಜುನೇಜ ಅವರು ಹಾಸ್ಯ ಪಾತ್ರಗಳ ಮೂಲಕ ಫೇಮಸ್ ಆಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








