ತುಮಕೂರು : ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ನಿಧನ!!

ಬೆಂಗಳೂರು:

      ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯದ ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ (65) ಇಂದು ಚಿಕಿತ್ಸೆ ಫಲಕಾರಿಯಾಗದ ಕೊನೆಯುಸಿರೆಳೆದಿದ್ದಾರೆ.

      ತುಮಕೂರಿನ ಹೆಬ್ಬೂರು ಹೋಬಳಿಯ ಸುಗ್ಗನಹಳ್ಳಿ-ಕೆಂಕೆರೆ ಬಳಿಯ ತಮ್ಮ ತೋಟಕ್ಕೆ ಹೋಗುವ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ, ಸಿದ್ದಯ್ಯ ಅವರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

      ಇಂದು ಮಧ್ಯಾಹ್ನ ತುಮಕೂರಿಗೆ ಪಾರ್ಥಿವ ಶರೀರವನ್ನು ತಂದು ಟೌನ್ ಹಾಲ್ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗುವುದು. ಸಂಜೆ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

      ತುಮಕೂರು ಜಿಲ್ಲೆಯ ಮಾಗಡಿ ತಾಲೂಕಿನವರಾದ ಕೆ.ಬಿ.ಸಿದ್ದಯ್ಯ, ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದರು. 1970-80ರ ದಶಕದಲ್ಲಿ ದಲಿತ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದರು. ದಕ್ಕಲ ಕಥಾದೇವಿ, ಬಕಾಲ, ಗಲ್ಲೆಭಾನಿ ಸೇರಿದಂತೆ ಹಲವು ಖಂಡಕಾವ್ಯವನ್ನು ಸಿದ್ದಯ್ಯ ಅವರು ರಚಸಿದ್ದರು‌. ರಾಜ್ಯೋತ್ಸವ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link