ಬೆಂಗಳೂರು
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಹಾಗೂ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ರಾಜ್ಯಕ್ಕೆ ಆಗಮಿಸಲಿದೆ.
ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರ ನ್ನೊಳಗೊಂಡ ತಂಡ, ಚುನಾವಣಾ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಸಲುವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಸಲಹೆಗಳನ್ನು ಸ್ವೀಕರಿಸಲಿದೆ.
ಕೇಂದ್ರ ಚುನಾವಣಾ ಆಯೋಗ ಮತ್ತು ಇತರ ಅಧಿಕಾರಿಗಳು ಅಂತರ್ಗತ ಪ್ರಜಾಪ್ರಭುತ್ವದ ಕುರಿತಾದ ಅಂತಾರಾಷ್ಟಿçÃಯ ಸೆಮಿನಾರ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಸೆಮಿನಾರ್‌ನಲ್ಲಿ ವಿವಿಧ ದೇಶಗಳ ಮುಖ್ಯ ಚುನಾವಣಾ ಆಯುಕ್ತರು ಪ್ರತ್ಯಕ್ಷವಾಗಿ ಅಥವಾ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
