ನವದೆಹಲಿ : 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3ಕ್ಕೆ ಚುನಾವಣೆ

ನವದೆಹಲಿ: 

    ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಘೋಷಿಸಿದೆ.

    ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ತೆರವಾದ ಸ್ಥಾನಗಳಿಗೆ ಈಗ ಚುನಾವಣೆ ಘೋಷಿಸಲಾಗಿದೆ.

   ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ. ಪ್ರತಿ ರಾಜ್ಯಸಭಾ ಸ್ಥಾನಕ್ಕೆ ಸೆಪ್ಟೆಂಬರ್ 3 ರಂದು ಪ್ರತ್ಯೇಕವಾಗಿ ಮತದಾನ ನಡೆಸಲಾಗುವುದು ಮತ್ತು ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Recent Articles

spot_img

Related Stories

Share via
Copy link