ನವದೆಹಲಿ:
ಸಂಸತ್ತಿನ ಚಳಿಗಾಲದ ಅಧಿವೇಶನದ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.ಇಂದಿನಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಗಣ್ಯರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಬುಧವಾರದವರೆಗೂ ಮುಂದೂಡಲಾಯಿತು.