ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತ : ಮಕ್ಕಳು ಪ್ರಾಣಾಪಾಯದಿಂದ ಪಾರು….!

ಡುಪಿ: 

   ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿ ಪ್ರಾಣ ಬಿಟ್ಟಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಮಕ್ಕಳು ಸೇಫ್ ಆಗಿದ್ದಾರೆ. ಈ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

    ಆಲ್ವಿನ್ ಡಿಸೋಜಾ ಮೃತ. ಈತ ಪೇತ್ರಿ ನಿವಾಸಿಯಾಗಿದ್ದಾನೆ. ಶಾಲಾ ಬಸ್​ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು.

     ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

    ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಆಗಿದೆ. ಈ ಘಟನೆಯಿಂದ ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap