ಪಕ್ಷದಿಂದ 6 ವರ್ಷಗಳ ಕಾಲ ಶೇಖ್ ಷಹಜಹಾನ್ ಅಮಾನತು…!

ನವದೆಹಲಿ:

    ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಗುಂಪು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಪಕ್ಷದ ಪ್ರಬಲ ನಾಯಕ ಶೇಖ್ ಷಹಜಹಾನ್ ಅವರನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.

    ಶೇಖ್ ಷಹಜಹಾನ್ ಅವರನ್ನು ಬಂಧಿಸಿದ ಒಂದು ದಿನದ ನಂತರ, ತೃಣಮೂಲ ಕಾಂಗ್ರೆಸ್ ಪಕ್ಷ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಿದೆ.

    ಈ ಕ್ರಮವನ್ನು ಪ್ರಕಟಿಸಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ, ಪಕ್ಷದ ನಾಯಕರು ಬಿಜೆಪಿಯನ್ನು ಕಟುವಾಗಿ ಟೀಕಿಸಿದರು ಮತ್ತು ಮಾಜಿ ಕುಸ್ತಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಂತಹ ಕಳಂಕಿತ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯ ಮಾಡಬೇಕು ಎಂದು ಆಗ್ರಹಿಸಿದರು.

    ಬಂಧಿತ ಸಂದೇಶಖಾಲಿ ದೌರ್ಜನ್ಯ ಪ್ರಕರಣ ಹಾಗೂ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಮುಖ ಆರೋಪಿ, ಟಿಎಂಸಿ ಮುಖಂಡ ಶಹಜಹಾನ್‌ ಶೇಕ್‌ ಗೆ ಪಶ್ಚಿಮಬಂಗಾಳದ ಬಸ್ರಿಹಾತ್‌ ಕೋರ್ಟ್‌ ಗುರುವಾರ (ಫೆ.29) 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.‌ ವಿಚಾರಣೆಯ ಹಿನ್ನೆಲೆಯಲ್ಲಿ ಆರೋಪಿಯನ್ನು 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಬೇಕೆಂದು ಪೊಲೀಸರು ಕೋರ್ಟ್‌ ಗೆ ಮನವಿ ಮಾಡಿಕೊಂಡಿದ್ದರು, ಆದರೆ ಕೋರ್ಟ್‌ 10 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿರುವುದಾಗಿ ಶಹಜಹಾನ್‌ ಪರ ವಕೀಲ ರಾಜಾ ಬೌಮಿಕ್‌ ತಿಳಿಸಿರುವುದಾಗಿ ವರದಿಯಾಗಿದೆ.

     2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್‌, ಜನವರಿ 5ರಿಂದ ನಾಪತ್ತೆಯಾಗಿದ್ದರು. ಶೇಖ್‌, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap