ಮೇ 3 ರಂದು ರಾಜ್ಯಕ್ಕೆ ಷಾ ಭೇಟಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

ಬೆಂಗಳೂರು:

ಬೆಂಗಳೂರು ಏಪ್ರಿಲ್ 29 ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಕಷ್ಟು ಚರ್ಚೆಯಲ್ಲಿದೆ. ಈ ನಡುವೆ ಮೇ 3 ರಂದು ಕೇಂದ್ರ ಸಚಿವ ಅಮಿತ್ ಷಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಯಿತಾದರೂ ಅಂತಿಮ ಆಗಲಿಲ್ಲ. ಕರ್ನಾಟಕದ ಸಂಪುಟ ವಿಸ್ತರಣೆ ಸಂಬಂಧ ನೀವು ಪಟ್ಟಿ ಕೊಡಿ. ದೆಹಲಿಯಲ್ಲಿ ಪಕ್ಷದ ವರಿಷ್ಠರು ಕುಳಿತು ಚರ್ಚಿಸುತ್ತೇವೆ. ಆ ಬಳಿಕ ನಿಮ್ಮನ್ನು ಬರಹೇಳುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿ ಹೋಗಿದ್ದರು.

ಇಂದು ಜೆ.ಎಸ್.ಗ್ರೂಪ್ ಆಫ್ ಕಂಪನಿ ಆಯೋಜಿಸಿದ್ದ ನೂತನ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ್‌ ಬೊಮ್ಮಾಯಿ, ದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ ಎಂದರು.

ರಾಜ್ಯದ ಜತೆಗೆ ಬಿಗ್‌ ಶಾಕ್‌ : ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ

ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹೊರಟಿದ್ದಾರೆ. ‘ಏ.29ರಂದು ರಾತ್ರಿ 8 ಗಂಟೆ ಸುಮಾರಿಗೆ ರೆಗ್ಯುಲರ್ ವಿಮಾನದ ಮೂಲಕ ನವದೆಹಲಿಗೆ ಹೋಗಲಿದ್ದಾರೆ. ಏಪ್ರಿಲ್ 30 ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಮುಖ್ಯ ನ್ಯಾಯಮೂರ್ತಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಸದ್ಯ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಇತ್ತೀಚೆಗೆ ಖಾಲಿಯಾದ ಕೆ.ಎಸ್. ಈಶ್ವರಪ್ಪ ಅವರ ಸ್ಥಾನ ಸಹಿತ ಒಟ್ಟು ಐದು ಸ್ಥಾನಗಳು ಖಾಲಿ ಇವೆ. ಕೆಲ ಹಳಬರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ. ಒಟ್ಟಾರೆ 12-15 ಹೊಸ ಸಚಿವರು ಬರಲಿದ್ದಾರೆ ಎಂಬ ಊಹಾಪೋಹಗಳು ಬಹುದಿನಗಳಿಂದ ಹರಿದಾಡುತ್ತಿವೆ.

ಕೆಜಿಎಫ್ ಚಾಪ್ಟರ್ 2 ವಿಶೇಷ ದಾಖಲೆ: ಒಂದೇ ವಾರದಲ್ಲಿ 800 ಕೋಟಿ ರೂಪಾಯಿ ಕಲೆಕ್ಷನ್‌

ಪ್ರತಿ ಸಾರಿ ಹೋಗಿ ಬರಿಗೈಲಿ ವಾಪಸಾಗುತ್ತಿರುವ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯಾದರೂ ತಮ್ಮ ಸಂಪುಟಕ್ಕೆ ಬಲ ತಂದುಕೊಳ್ಳುತ್ತಾರಾ ಎಂಬ ನಿರೀಕ್ಷೆ ಇತ್ತು. ಆದರೆ, ಮುಖ್ಯಮಂತ್ರಿಯ ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುವುದಿಲ್ಲ. ಅಮಿತ್ ಶಾ ಅವರ ಕರ್ನಾಟಕ ಭೇಟಿ ಸಂದರ್ಭದಲ್ಲಿ ಅಂತಿಮ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link