ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ತರಗತಿ ಶುರು….!

ಬೆಂಗಳೂರು

     ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅಂದರೆ ಹರುಷ. ಶಾಲೆಗೆ ರಜೆ ಅಂತಾ ಊರೂರು ಸುತ್ತಾಡಿಕೊಂಡು ಮಜಾ ಮಾಡುತ್ತಾರೆ. ಆದರೆ ಇದಕ್ಕೆಲ್ಲಾ ಮಳೆ ಬ್ರೇಕ್​ ಹಾಕಿದೆ. ಈ ವರ್ಷ ವಿಪರಿತ ಮಳೆ ಹೆಚ್ಚಾಗಿದ್ದು, ಪೋಷಕರು ಮಕ್ಕಳನ್ನು ಮನೆಯಿಂದ ಹೊರಗಡೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗ ಖಾಸಗಿ ಶಾಲೆಗಳು ಇದನ್ನೆಲ್ಲಾ ಲೆಕ್ಕಿಸದೇ ನಿಯಮ ಉಲ್ಲಂಘಿಸಿ ಶಾಲೆಗಳನ್ನು ಆರಂಭಿಸಿವೆ.

     ರಾಜಧಾನಿಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಕೆಲವು ಏರಿಯಾಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಉಂಟಾಗಿದೆ. ಸಾಕಷ್ಟು ಮನೆಗಳಿಗೆ ನೀರು ನುಗ್ಗಿ ಜನರ ಪರದಾಟಕ್ಕೆ ಕಾರಣವಾಗಿದೆ. ಇತಂಹ ಸಂದರ್ಭದಲ್ಲಿ ಕೆಲವು ಖಾಸಗಿ ಶಾಲೆಗಳು ತರಗತಿಗಳನ್ನು ಆರಂಭಿಸಿ ಹುಚ್ಚಾಟ ಶುರುಮಾಡಿವೆ. ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಮಕ್ಕಳಿಗೆ ಬೇಸಿಗೆ ರಜೆ ನೀಡದೆ ಕೆಲವು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ತರಗತಿ ಆರಂಭಿಸಲಾಗಿದೆ.

    ಪ್ರಸಕ್ತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳು ಮೇ 29 ರಿಂದ ಪುನರಾರಂಭಗೊಳ್ಳುತ್ತಿವೆ. ಆದರೆ ಈ ವ್ಯಾಪಕ ಮಳೆಯ ನಡುವೆಯೂ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಆರಂಭಗೊಂಡಿವೆ. ಮಕ್ಕಳಿಗೆ ಬೇಸಿಗೆ ರಜೆ ನೀಡದೆ ಶೈಕ್ಷಣಿಕ ವರ್ಷದ ತರಗತಿಗಳನ್ನ ಆರಂಭ ಮಾಡಿವೆ. ಪೋಷಕರಿಗೂ ಮಕ್ಕಳನ್ನ ಈ ಸಮಯದಲ್ಲಿ ಶಾಲೆಗೆ ಕಳಿಸಲು ಇಷ್ಟವಿಲ್ಲ. ಆದರೆ ಈ ಮಧ್ಯೆ ಖಾಸಗಿ ಶಾಲೆಗಳು ಆರಂಭಿಸಿದ್ದು, ತರಗತಿಗಳನ್ನು ಶುರು ಮಾಡುತ್ತಿವೆ.

   ಕೆಲವು ಶಾಲೆಗಳಿಂದ ಮಕ್ಕಳನ್ನ ಶಾಲೆಗೆ ಕಳಿಸುವಂತೆ ವಾಟ್ಸ್ ಆ್ಯಪ್ ಮೇಸೆಜ್ ಕಳುಹಿಸಲಾಗುತ್ತಿದೆಯಂತೆ. ಈ ಕೆಲವು ಶಾಲೆಗಳು ಈಗಾಗಲೇ ಮುಂದಿನ ತರಗತಿಗೆ ಬಡ್ತಿ ಪಡೆದ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಕ್ರಮಕೈಗೊಳ್ಳುವಂತೆ ಪೋಷಕರ ಸಮನ್ವಯ ಸಮಿತಿ ಅಧ್ಯಕ್ಷ ಯೋಗಾನಂದ್​ ಒತ್ತಾಯಿಸಿದ್ದಾರೆ.

   ಇನ್ನು ಈ ಬಗ್ಗೆ ಕೆಲವು ಖಾಸಗಿ ಶಾಲೆಗಳ ಒಕ್ಕೂಟಕ್ಕೂ ದೂರು ಬಂದಿವೆ. ಹೀಗಾಗಿ ಕೆಲವು ಖಾಸಗಿ ಶಾಲೆಗಳ ಒಕ್ಕೂಟ ಈ ಬಗ್ಗೆ ಸೂಕ್ತ ಸೂಚನೆ ನೀಡಿದೆ. ಜೊತೆಗೆ ಬೇಸಿಗೆ ರಜೆಯಲ್ಲಿ ಶಾಲೆ ನಡೆಸುವುದು ಸೂಕ್ತವಲ್ಲ, ಇತಂಹ ಶಾಲೆ ವಿರುದ್ಧ ಕ್ರಮವಹಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಕೂಡ ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ. 

   ಸಿಲಿಕಾನ್ ಸಿಟಿಯಲ್ಲಿ ಈ ವರ್ಷ ಮಳೆಗಾಲದ ಅಬ್ಬರದ ನಡುವೆ ಖಾಸಗಿ ಶಾಲೆಗಳು ಬೇಸಿಗೆ ರಜೆಯಲ್ಲಿಯೂ ತರಗತಿಗೆ ಹಾಜರಾಗುವಂತೆ ಮಕ್ಕಳಿಗೆ ಒತ್ತಡ ಹಾಕಿದ್ದು, ಮಕ್ಕಳ ಹಕ್ಕುಗಳ ಉಲ್ಲಂಘಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಇತಂಹ ಶಾಲೆಗಳ ವಿರುದ್ಧ ಸೂಕ್ತ ಕ್ರಮವಹಿಸಬೇಕಿದೆ.

Recent Articles

spot_img

Related Stories

Share via
Copy link