ರಾಜ್ಯ ಸರ್ಕಾರದ ಯೋಜನೆ ಹೊಗಳಿದ ರಾಹುಲ್‌ ಗಾಂಧಿ: ಯಾವ ಯೋಜನೆ ಗೊತ್ತಾ….?

ನವದೆಹಲಿ: 

    ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವುದನ್ನು ಖಾತ್ರಿಪಡಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಶ್ಲಾಘಿಸಿದರು.

     ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕರ್ನಾಟಕದಲ್ಲಿ ಲಕ್ಷ್ಮಿ, ವಂದನಾ, ಪೂಜಾ ಮತ್ತು ಅವರಂತಹ ಲಕ್ಷಾಂತರ ಮಹಿಳೆಯರು ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ ಸಬಲರಾಗಿದ್ದಾರೆ. ಇದು ಅವರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತದೆ’ ಎಂದು ಹೇಳಿದ್ದಾರೆ.

     ಶಾಲೆ, ಕಾಲೇಜಿಗೆ, ಕೆಲಸಕ್ಕೆ ಹೋಗಲಿ ಅಥವಾ ರಾಜ್ಯದ ಎಲ್ಲಿಗೆ ಹೋಗಲಿ, ‘ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ಗಣನೀಯ ಆರ್ಥಿಕ ಉಳಿತಾಯವನ್ನು ಮಾಡಿದೆ’ ಎಂದು ಅವರು ಹೇಳಿದರು.

     ‘ಈ ಯೋಜನೆಯು ಸ್ಥಳೀಯ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ನಮ್ಮ ಆಡಳಿತ ಮಾದರಿಯು ಕರ್ನಾಟಕದ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವುದನ್ನು ಖಾತ್ರಿಪಡಿಸುತ್ತಿದೆ ಎಂಬುದು ಹೆಮ್ಮೆಯ ವಿಷಯ’ ಎಂದು ಅವರು ಹೇಳಿದರು.

     ಅವರು ತಮ್ಮ ಟ್ವೀಟ್‌ನೊಂದಿಗೆ ಸುದ್ದಿ ವರದಿಯನ್ನು ಸಹ ಲಗತ್ತಿಸಿದ್ದಾರೆ. ಶಕ್ತಿ ಯೋಜನೆ, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಘೋಷಿಸಲಾದ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಭಾಗವಾಗಿತ್ತು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯೋಜನೆ ಜಾರಿಗೊಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap