ಬೆಂಗಳೂರು:
ಕರ್ನಾಟಕದ ಮಹಿಳೆಯರಿಗೆ ಗ್ಯಾರಂಟಿ ಸ್ಕೀಮ್ ಆಗಿ ಕಾಂಗ್ರೆಸ್ ಸರಕಾರ ನೀಡಿರುವ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯಡಿಯಲ್ಲಿ ಇದುವರೆಗೆ ಮಹಿಳೆೆಯರು ಬರೋಬ್ಬರಿ 475 ಕೋಟಿ ಬಾರಿ ಉಚಿತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ಶಕ್ತಿ ಯೋಜನೆಯಡಿ ನೀಡಲಾದ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ.
ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರಿಗೆ ಮೀಸಲಾಗಿದ್ದು, ಸಾರ್ವಜನಿಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಲ್ಪಿಸಿದೆ. ದಿನನಿತ್ಯದ ದುಡಿಮೆಗೆ, ಶಿಕ್ಷಣಕ್ಕೆ ತೆರಳುವ ಹಾಗೂ ಪ್ರವಾಸ ತೆರಳುವ ಮಹಿಳೆಯರು ಈ ಯೋಜನೆಯನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಶಕ್ತಿ ಯೋಜನೆಯು ಈಗ ಯಶಸ್ವಿಯಾಗಿ 2 ವರುಷ ಪೂರೈಸಿದೆ.
ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ನೆಮ್ಮದಿಯ ಮಂದಹಾಸ ಮೂಡಿರುವುದು ಈ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿ ಎಂದು ಸರಕಾರ ತಿಳಿಸಿದೆ. ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 475 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ.