ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪುತ್ರ ಆತ್ಮಹತ್ಯೆ

ತುಮಕೂರು:

      ತುಮಕೂರು ನಗರದ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಯೇ ತ್ರಿಶಾಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರ್ವೊದಯ ಸ್ಕೂಲ್‌ನಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾಲ್, ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

   ಮೃತ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Recent Articles

spot_img

Related Stories

Share via
Copy link