ದಾವಣಗೆರೆ:
ಒಕ್ಕಲಿಗ ಸಮಾಜದ ಚಂದ್ರಶೇಖರ್ ಸ್ವಾಮೀಜಿ ಹೇಳಿದಾಕ್ಷಣ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ನಾನು ಹೇಳಿದಾಕ್ಷಣ ಮಾಡಲು ಆಗುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದರು.
ಎಲ್ಲಾ ಪ್ರಶ್ನೆಗಳಿಗೂ ಹೈಕಮಾಂಡ್ ಉತ್ತರ ನೀಡುತ್ತದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡಿಲ್ಲ ಎಂದು ಹೇಳಿದವರ್ಯಾರು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಏನೇ ಸಮಸ್ಯೆ ಆದರೂ ಸರಿಯಾಗಿ ಉತ್ತರ ನೀಡುತ್ತಾರೆ. ಹೈಕಮಾಂಡ್ ಪ್ರಕಾರ ನಡೆದುಕೊಳ್ಳುತ್ತಾರೆ. ಯಾರು ಏನು ಹೇಳಿದ್ರೂ ನಡೆಯಲ್ಲ. ಅದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
ನಿಮಗೆ ಅನುಭವವಿದೆ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ಇನ್ನೂ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿದ್ದು, ವೇದಿಕೆ ಮೇಲೆಯೇ ಸ್ವಾಮೀಜಿಯೊಬ್ಬರ ಈ ಬೇಡಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.