ಬೆಂಗಳೂರು:
ಮಹಿಳೆಯನ್ನು ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದು ಪರಾರಿಯಾಗಿದ್ದ ಘಟನೆಯಲ್ಲಿ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಪುಷ್ಪ ಎಂದು ಗುರುತಿಸಲಾಗಿದೆ. ಅನ್ಯಕೋಮಿನವನ ಜೊತೆ ಈಕೆ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ನಲ್ಲಿ ಇದ್ದಳು ಎನ್ನಲಾಗುತ್ತಿದೆ. ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ ಪೊಲೀಸರು ಶಂಶುದ್ದೀನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಪುಷ್ಪಳನ್ನು ಜೊತೆಯಲ್ಲಿದ್ದ ಶಂಶುದ್ದೀನ್ ಎಂಬಾತನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಹಿಳೆಯನ್ನು ಕೊಲೆ ಮಾಡಿ ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟಿದ್ದಾನೆ. ತಡರಾತ್ರಿ ದ್ವಿಚಕ್ರ ವಾಹದಲ್ಲಿ ಬಂದ ಹಂತಕ ಬಿಬಿಎಂಪಿ ಲಾರಿಯಲ್ಲಿ ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಪುಷ್ಪ ಎಂಬಾಕೆ 30-40 ವಯಸ್ಸಿನ ಮಹಿಳೆಯಾಗಿದ್ದಾರೆ. ಶಂಶುದ್ದಿನ್ ಜೊತೆ ಲಿವಿಂಗ್ ಟುಗೆದರ್ ರಿಲೇಷನ್ಶಿಪ್ನಲ್ಲಿ ಇದ್ದ ಪುಷ್ಪ ಅವನನ್ನು ಮದುವೆಯಾಗಲು ನಿರ್ಧರಿಸಿದ್ದಳು ಎನ್ನಲಾಗ್ತಿದೆ.
ಶಂಶುದ್ದೀನ್ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಇಬ್ಬರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈತನೇ ಆಕೆಯನ್ನು ಕೊಂದು ದ್ವಿಚಕ್ರ ವಾಹನದಲ್ಲಿ ಮೃತದೇಹ ತಂದು ಹಾಕಿದ್ದಾನೆ ಎನ್ನಲಾಗುತ್ತಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವಾಪ್ತಿಯಲ್ಲಿ ಈ ಬರ್ಬರ ಹತ್ಯೆ ನಡೆದಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಶಂಶುದ್ದೀನ್‌ನನ್ನು ಪತ್ತೆ ಮಾಡಿದ ಪೊಲೀಸರು ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.