ಹೊಸಕೋಟೆ :
ಗ್ರಾಮೀಣ ಪ್ರದೇಶದ ಬಾಲಕಿಯರು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುವಾಗುವಂತೆ 1.25 ಕೋಟಿ ರೂ.ಗಳ ವೆಚ್ಚದಲ್ಲಿ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಲು ಯೋಜಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಅವರು ನಗರದ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಲಭ್ಯವಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಪನ್ಯಾಸಕರ ಗುಣಮಟ್ಟದ ಬೋಧನೆ, ಬಾಲಕಿಯರ ಕಲಿಕಾ ಸಾಮರ್ಥ್ಯದಿಂದಾಗಿ ಉತ್ತಮ ಫಲಿತಾಂಶ ಸಹ ಪಡೆದುಕೊಳ್ಳುತ್ತಿದ್ದು ಗ್ರಾಮಾಂತರ ಜಿಲ್ಲೆಗೆ ಮಾದರಿಯಾಗಿದೆ.
ಕಾಲೇಜಿನಲ್ಲಿ ಪ್ರಸ್ತುತ 1100ಕ್ಕೂ ಹೆಚ್ಚಿನ ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದು ಸ್ಥಳವಕಾಶದ ಕೊರತೆ ನೀಗಿಸಲು ಸಹಕಾರಿಯಾಗಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈಗಾಗಲೇ 1.25 ಕೋಟಿ ರೂ.ಗಳು ಮಂಜೂರಾಗಿದ್ದು ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ