ಕೇರಳ ದೇಗುಲದಲ್ಲಿ “ಶತ್ರು ಭೈರವಿ ಯಾಗ” : ಡಿಸಿಎಂ ಸ್ಪಷ್ಟನೆ …..!

ಬೆಂಗಳೂರು:

     ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ “ಶತ್ರು ಭೈರವಿ ಯಾಗ” ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.

     ಕೇರಳದ ರಾಜರಾಜೇಶ್ವರಿ ದೇಗುಲದಲ್ಲಿ “ಶತ್ರು ಭೈರವಿ ಯಾಗ” ನಡೀತಿದೆ. 21 ಮೇಕೆ, 3 ಎಮ್ಮೆ, 21 ಕುರಿಗಳು ಸೇರಿದಂತೆ ಪಂಚ ಬಲಿ ಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೀತಾ ಇದೆ. ಅಘೋರಿಗಳ ಮೂಲಕ ಈ ಯಾಗ ಮಾಡಿಸುತ್ತಿದ್ದಾರೆ. ಯಾರು ಮಾಡುತ್ತಿದ್ದಾರೆ ಎಲ್ಲ ಗೊತ್ತಿದೆ. ಆದರೆ ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.

    ಈ ಬಗ್ಗೆ ವಿಡಿಯೋ ಸಹಿತ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಕೇರಳದ ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ.

    ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂಬುದು ನನ್ನ ವಿನಂತಿ” ಎಂದು ಟ್ವೀಟ್ ಮಾಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap