ಕೇಂದ್ರದ ವಿರುದ್ದ ಜಗದೀಶ್‌ ಶೆಟ್ಟರ್‌ ವಾಗ್ದಾಳಿ…!

ಹುಬ್ಬಳ್ಳಿ:

    ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌, ಇದು ಅಕ್ಷಮ್ಯ ಅಪರಾಧ’ ಎಂದು  ಆರೋಪಿಸಿದರು.

    ಬಿಪಿಎಲ್ ಕುಟುಂಬದ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಅಕ್ಕಿ ನೀಡುವ ಉದ್ದೇಶದಿಂದ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯಕ್ಕೆ ಅಕ್ಕಿ ಮಾರಾಟ ಅಥವಾ ಹೆಚ್ಚುವರಿ ಪೂರೈಕೆ ನಿರಾಕರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ‘ಕರ್ನಾಟಕಕ್ಕೆ ಅಕ್ಕಿ ಮಾರಾಟ ನಿರಾಕರಿಸಿರುವುದು ಕೇಂದ್ರ ಸರ್ಕಾರದ ಉತ್ತಮ ನಡತೆ ಅಲ್ಲ ಎಂದರು. 

    ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.  ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

    ಉಚಿತ ಪ್ರಯಾಣ ಯೋಜನೆ ಜಾರಿಯಾದ ನಂತರ ಪಕ್ಷ ಮತ್ತು ಸರ್ಕಾರದ ವರ್ಚಸ್ಸು ಸ್ಥಿರವಾಗಿ ಬೆಳೆಯುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಪಿಎಲ್ ಕಾರ್ಡುದಾರರ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಉಚಿತ ಅಕ್ಕಿ ಯೋಜನೆಗೆ ಚಾಲನೆ ನೀಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಜನಪರ ಒಲವು ಹೆಚ್ಚಾಗಲಿದ್ದು, ಲೋಕಸಭೆ ಚುನಾವಣೆ ವೇಳೆಗೆ  ಬಿಜೆಪಿಗೆ ಈ ಬೆಳವಣಿಗೆ ಪ್ರತಿಕೂಲವಾಗಲಿದೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap