ಟಿಕಟ್‌ ವಂಚಿತ ಜಗದೀಶ್‌ ಶೆಟ್ಟರ್‌ ಗೆ ದೆಹಲಿಯಿಂದ ಬುಲಾವ್‌…!

ಹುಬ್ಬಳ್ಳಿ:

    ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

     ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನ ಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

    ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ.ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

    ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap