ಶಿವಮೊಗ್ಗ:
ಸಿಲಿಂಡರ್ ತುಂಬಿದ ಲಾರಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಿಲಿಂಡರ್ ಸ್ಫೋಟಗೊಂದು ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ನಡೆದಿದೆ.
ಇಂಡಿಯನ್ ಗ್ಯಾಸ್ ಕಂಪೆನಿಯ ಸಿಲಿಂಡರ್‌ಗಳನ್ನು ತುಂಬಿಕೊಂಡಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು, ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಈ ಅವಘಡ ನಡೆದಿದೆ ಎನ್ನಲಾಗಿದೆ.
ಸಿಲಿಂಡರ್ ತುಂಬಿದ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಲಾರಿ ಸ್ಪೋಟಗೊಂಡ ಕಾರಣ ಚಾಲಕ ಕೃಷ್ಣಮೂರ್ತಿ ಸಜೀವ ದಹನವಾಗಿದ್ದಾರೆ.
ಮೃತ ಕೃಷ್ಣಮೂರ್ತಿ ಭದ್ರಾವತಿಯ ಮಾವಿನಕಟ್ಟೆ ಗ್ರಾಮದವರು ಎನ್ನಲಾಗಿದೆ. ಲಾರಿಯು ಇಂಡಿಯನ್ ಗ್ಯಾಸ್ ಕಂಪನಿಗೆ ಸೇರಿದ್ದು. ಸ್ಫೋಟ ದಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಅಗ್ನಿ ಶಾಮಕದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
