ಮುಂಬೈ:
ಮಹತ್ವದ ಬೆಳವಣಿಗೆಯಲ್ಲಿ ಮುಂಬೈನಲ್ಲಿರುವ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ನಿವಾಸಕ್ಕೆ ಮಹಾರಾಷ್ಟ್ರ ಮುಖ್ಯ ಮಂತ್ರಿ ಶಿಂಧೆ ಭೇಟಿ ನೀಡಿ ಠಾಕ್ರೆ ಅವರೊಂದಿಗೆ ಸುಧೀರ್ಘ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.ಇದು ಮಹಾರಾಷ್ಟ್ರ ರಾಜಕಾರಣದಲ್ಲಿ ಕತೂಹಲದ ಟಲೆಯನ್ನು ಸಹ ಎಬ್ಬಿಸಿದೆ.
ಬುಧವಾರ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ, ಮುಂಬೈನ ಸೌಂದರ್ಯಕ್ಕಾಗಿ 1,700 ಕೋಟಿ ರೂ.ಗಳನ್ನು ವ್ಯಯಿಸುತ್ತಿರುವ ಏಕನಾಥ್ ಶಿಂಧೆ-ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕಳೆದ ವರ್ಷ ಜೂನ್‌ನಲ್ಲಿ ಬಂಡಾಯದ ಬಾವುಟ ಹಾರಿಸಿದ ಸಿಎಂ ಶಿಂಧೆ ಮತ್ತು ಅವರನ್ನು ಬೆಂಬಲಿಸುವ 39 ಶಾಸಕರು ಸೇರಿದಂತೆ ಹಲವು ಶಿವಸೇನೆ ನಾಯಕರು ಪಕ್ಷದಿಂದ ನಿರ್ಗಮಿಸಿದ್ದಕ್ಕೆ ಉದ್ಧವ್ ಠಾಕ್ರೆ ಅವರನ್ನು ರಾಜ್ ಠಾಕ್ರೆ ದೂಷಿಸಿದರು.