ಮುಂಬೈ :
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ, ಅಹ್ಮದ್ ನಗರ ಜಿಲ್ಲಾಡಳಿತ ಮಂಗಳವಾರ ಹೊಸ ಅನ್‌ಲಾಕ್ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಪ್ರಸಿದ್ಧ ಶಿರಡಿ ಸಾಯಿಬಾಬಾ ದೇಗುಲ ಹಾಗೂ ಶನಿ ಶಿಂಗ್ನಾಪುರ ದೇಗುಲಗಳನ್ನು ತೆರೆಯಲು ಅವಕಾಶ ನೀಡಿದೆ.
ಹೊಸ ಮಾರ್ಗಸೂಚಿಗಳನ್ನು ಅಹಮದ್ ನಗರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಬಿ ಭೋಸಲೆ ಮಂಗಳವಾರ ಹೊರಡಿಸಿದ್ದು, ಅಕ್ಟೋಬರ್ 7ರಿಂದ ದೇಗುಲಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.
ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಒಂದು ದಿನದಲ್ಲಿ ಕೇವಲ 15,000 ಭಕ್ತರಿಗೆ ಅವಕಾಶ ನೀಡಲಾಗುವುದು. ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ 20 ಸಾವಿರ ಭಕ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ