ನಾನು ಯಾವುದೇ ಹುದ್ದೆಗೆ ಅಂಟಿಕೊಂಡಿಲ್ಲ: ಡಿಸಿಎಂ

ಬೆಂಗಳೂರು:

    ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಾವು ಯಾವುದೇ ಹುದ್ದೆದೆ ಅಂಟಿಕೊಂಡು ಕೂತಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

   ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, ಹೊಸ ರಾಜ್ಯಾಧ್ಯಕ್ಷರ ಬೇಡಿಕೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಯಾವುದೇ ಹುದ್ದೆಗೆ ಅಂಟಿಕೊಂಡು ಕೂತಿಲ್ಲ . ನಮ್ಮ ಪಕ್ಷದಲ್ಲಿ ಅವರ ನಾಯಕತ್ವ ಮತ್ತು ಸಂಘಟನಾ ಸಾಮರ್ಥ್ಯದ ಆಧಾರದ ಮೇಲೆ ಸ್ಥಾನಗಳನ್ನು ನೀಡಲಾಗುತ್ತದೆ. ನಾನು ಇತರ ರಾಜಕೀಯ ಪಕ್ಷಗಳ ಬಗ್ಗೆ ಮಾತನಾಡುವುದಿಲ್ಲ. ಹುದ್ದೆಯ ಬಗ್ಗೆ ಮಾಧ್ಯಮಗಳಲ್ಲಿ ಚರ್ಚಿಸಬೇಕಾಗಿಲ್ಲ” ಎಂದರು.

   “ಪಕ್ಷವು ಈ ಸಮಸ್ಯೆಗಳನ್ನು ಪರಿಹರಿಸುತ್ತದೆ ಮತ್ತು ಕರ್ನಾಟಕದವರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದಿದೆ” ಎಂದರು. ಏತನ್ಮಧ್ಯೆ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಬೆಂಗಳೂರಿನಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ ಅವರ ಮನೆಗೆ ಭೇಟಿ ನೀಡಿ, ಸುಮಾರು 40 ನಿಮಿಷಗಳ ಕಾಲ ಚರ್ಚಿಸಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

   ಬಳಿಕ ಮಾಧ್ಯಮದವರು ಪ್ರಶ್ನಿಸಿದಾಗ, ಯಾವುದೇ ನಿರ್ದಿಷ್ಟ ವಿಷಯಗಳ ಬಗ್ಗೆ ಚರ್ಚಿಸಲಾಗಿಲ್ಲ ಮತ್ತು ಇದು ಅನೌಪಚಾರಿಕ ಸಭೆಯಾಗಿತ್ತು ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದರು.

   ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಮಹದೇವಪ್ಪ ವೈಯಕ್ತಿಕ ವಿಷಯಗಳ ಬಗ್ಗೆ ಚರ್ಚಿಸಲು ಬಂದಿದ್ದರು. ನಮಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶವಿಲ್ಲವೇ? ನಾವು ಆಗಾಗ್ಗೆ ಪರಸ್ಪರ ಭೇಟಿ ಮಾಡುತ್ತೇವೆ. ನಾವು ಒಟ್ಟಿಗೆ ಊಟ ಅಥವಾ ಭೋಜನ ಮಾಡುವುದು ತಪ್ಪಾ?” ಎಂದರು.

 

Recent Articles

spot_img

Related Stories

Share via
Copy link