ಬೆಂಗಳೂರು :
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ ಕನ್ನಡದಲ್ಲೇ ಗೌರವ ನಮನ ಸಲ್ಲಿಸಿದ್ದಾರೆ.ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ.
ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ನಮನ ಸಲ್ಲಿಸಿದ್ದಾರೆ.ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ.
ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶ್ರೀಗಳ ಜಯಂತ್ಯೋತ್ಸವಕ್ಕೆ 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ವಸ್ತುಪ್ರದರ್ಶನ ಮೈದಾನದ ಪಕ್ಕದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ